ಸ್ವಚ್ಛತೆ ಆರೋಗ್ಯದೆಡೆಗಿನ ಮೊದಲ ಹೆಜ್ಜೆ. ನಮ್ಮ ಸುತ್ತ-ಮುತ್ತಲಿನ ಪರಿಸರವನ್ನು ಸ್ವಚ್ಛವಾಗಿರಿಸಿಕೊಳ್ಳುವುದರಿಂದ ರೋಗ-ರುಜಿನಗಳು ಹರಡುವುದನ್ನು ತಡೆಗಟ್ಟಬಹುದು. ಆದರೆ, ಆರೋಗ್ಯ ಹದಗೆಟ್ಟಲ್ಲಿ ನೋಡಿಕೊಳ್ಳಬೇಕಾದ ಸರ್ಕಾರಿ ಆಸ್ಪತ್ರೆಗಳೇ ಸ್ವಚ್ಛವಾಗಿರುವುದಿಲ್ಲ!

ಸರ್ಕಾರಿ ಆಸ್ಪತ್ರೆಗಳ ಈ ದೈನೀಸಿ ಸ್ಥಿತಿಯನ್ನು ಕಂಡು ಯುವಾಬ್ರಿಗೇಡ್ ‘ಸ್ವಚ್ಛತೆಯೇ ಆರೋಗ್ಯ’ ಎಂಬ ಹೆಸರಿನಡಿಯಲ್ಲಿ ಹಲವು ಜಿಲ್ಲೆಗಳ ಸರ್ಕಾರಿ ಆಸ್ಪತ್ರೆಗಳನ್ನು ಭಾನುವಾರಗಳಂದು ಸ್ವಚ್ಛಗೊಳಿಸಿತು. ಹಲವೆಡೆ ಸ್ವಚ್ಛಗೊಳಿಸಿದ್ದಷ್ಟೇ ಅಲ್ಲದೇ ಬಣ್ಣವನ್ನು ಹಚ್ಚಲಾಯ್ತು, ಶೌಚಾಲಯಗಳ ಪರಿಸ್ಥಿತಿಯನ್ನು ಸರಿಪಡಿಸಲಾಯ್ತು. ರಾಜ್ಯಾದ್ಯಂತ ಕಾರ್ಯಕರ್ತರು ಈ ಸ್ವಚ್ಛತಾ ಅಭಿಯಾನದಲ್ಲಿ ಹೆಮ್ಮೆಯಿಂದ ಪಾಲ್ಗೊಂಡರು.