“ಆಲ್ ದ ಬೆಸ್ಟ್”

Total
0
Shares

“ಆಲ್ ದ ಬೆಸ್ಟ್” ಒಂದು ಸ್ವಪ್ರೇರಣಾ, ಸ್ವಪ್ರಚೋದನಾ ತಂತ್ರ. ಕೆಲವು ಸುಲಭವಾಗಿ ಮತ್ತು ಸುಲಭವಾದ ಬದಲಾವಣೆಗಳನ್ನು ನಮ್ಮ ನಡೆ, ನುಡಿ ಹಾಗೂ ಅಚರಣೆಗಳಲ್ಲಿ ಮಾಡಿಕೊಳ್ಳುವುದರ ಮೂಲಕ ಹೇಗೆ ನಾವು ಜೀವನದಲ್ಲಿ ಉನ್ನತಿಯನ್ನು ಸಾಧಿಸಬಹುದಾಗಿದೆ ಎಂಬುದನ್ನು ಅರಿತುಕೊಳ್ಳುವುದೇ ಆಗಿದೆ.

ಇವುಗಳನ್ನು ಕಳೆದ ಬಾರಿ ಮತ್ತು ಈ ಬಾರಿ ಹತ್ತನೇ ತರಗತಿ ಪರೀಕ್ಷೆಗೆ ಸಿದ್ಧರಾಗುತ್ತಿರುವ ಮಕ್ಕಳಿಗೆ ಕಲಿಸುವ ಪ್ರಯತ್ನ ಮಾಡಿದೆವು. ಇದರ ಉದ್ದೇಶ ಮಕ್ಕಳು ಅವರ ಜೀವನದ ಒಂದು ಮುಖ್ಯವಾದ ಹಾಗೂ ಮೊದಲನೇ ಮೈಲುಗಲ್ಲನ್ನು ಧೈರ್ಯದಿಂದ ಎದುರಿಸಿ ಉತ್ತಮ ಅಂಕಗಳನ್ನು ಗಳಿಸುವಂತಾಗಲಿ ಎಂದು.
ದಿನದಲ್ಲಿ ಕೇವಲ ಇಪ್ಪತ್ತು ನಿಮಿಷಗಳ ಕಾಲ ಸುಲಭವಾಗಿ ಮಾಡಬಹುದಾದ ಸೂಕ್ಷ್ಮ ವ್ಯಾಯಾಮಗಳು, ಕೆಲವು ಆಸನಗಳು ಮತ್ತು ಪ್ರಾಣಾಯಾಮದಿಂದ ಹೇಗೆ ವಿದ್ಯಾರ್ಥಿಗಳು ತಮ್ಮ ಗಮನ ಹರಿಸುವಿಕೆ, ಮತ್ತು ನೆನಪಿನ ಶಕ್ತಿ ಹೆಚ್ಚಿಸಿಕೊಳ್ಳಬಹುದು, ಅದರಿಂದಾಗಿ ಪರೀಕ್ಷೆಯನ್ನು ಧೈರ್ಯವಾಗಿ ಎದುರಿಸಿ ಉತ್ತಮ ಫಲಿತಾಂಶ ಪಡೆಯಬಹುದು ಎಂಬುದನ್ನು ಈ “ಆಲ್ ದ ಬೆಸ್ಟ್” ತಂತ್ರದಲ್ಲಿ ವಿವರಿಸಲಾಗಿದೆ.

IMG-20180220-WA0013

ಈ ತಂತ್ರವನ್ನ ಇದೇ ಹೆಸರಿನಿಂದ ಒಂದು ಕಿರು ಹೊತ್ತಿಗೆಯನ್ನಾಗಿ “ಅಧ್ಯಾತ್ಮ ಯೋಗ” ದ ಮ್ಯಾನೇಜಿಂಗ್ ಡೈರೆಕ್ಟರ್ ಹಾಗೂ ಯೋಗ ಸಾಧಕರೂ ಆದ ಶ್ರೀ ಸುಬ್ಬು ಭಯ್ಯ ಅವರು ರಚಿಸಿದ್ದಾರೆ ಮತ್ತು ಇನ್ಸಪೈರ್ ಪಬ್ಲಿಕೇಷನ್ ನವರು ಪ್ರಕಟಿಸಿದ್ದಾರೆ.
ಇದನ್ನೆ ಆಧಾರವಾಗಿಟ್ಟುಕೊಂಡು, ಒಂದು ತಂಡ ರಚಿಸಿ ಈ ಬಾರಿ ಬೆಳಗಾವಿಯ ಮುಗಳಖೋಡವನ್ನು ಕೇಂದ್ರವಾಗಿಟ್ಟು, ಸುತ್ತ ಮುತ್ತಲಿನ ಸುಮಾರು ಐವತ್ತಕ್ಕೂ ಹೆಚ್ಚು ಶಾಲೆಗಳಲ್ಲಿ ಈ ಕಾರ್ಯಕ್ರಮವನ್ನು ನಡೆಸಲಾಯ್ತು. ಇದಕ್ಕೂ ಮೊದಲು ಈ ಎಲ್ಲ ಶಾಲೆಗಳನ್ನು ಸಂಪರ್ಕಿಸಿ, ಕಾರ್ಯಕ್ರಮದ ಬಗ್ಗೆ ವಿವರಿಸಿ, ದಿನಾಂಕ, ಸಮಯ ನಿಗದಿಗೊಳಿಸಿಕೊಟ್ಟವರಲ್ಲಿ ಮುಖ್ಯರಾದವರು ಯುವ ಬ್ರಿಗೇಡ್ ಬೆಂಗಳೂರು ತಂಡದ ಕಾರ್ಯಕರ್ತರಾದ ಶ್ರೀ ಮನೋಹರ ಕೌಶಿಕ್, ರಾಜ್ಯ ಸಹಸಂಚಾಲಕರಾದ ಶ್ರೀ ಸಂತೋಷ್ ಸಾಮ್ರಾಟ್ ಮತ್ತು ಮುಗಳಖೋಡದ ಯುವ ಬ್ರಿಗೇಡ್ ಕಾರ್ಯಕರ್ತರುಗಳು. ಅಲ್ಲಿಗೆ ಹೋಗಿ ಕಾರ್ಯಕ್ರಮ ನಡೆಸಿಕೊಟ್ಟ ತಂಡದ ಸದಸ್ಯರುಗಳು ಶ್ರೀ ಸುಬ್ಬು ಭಯ್ಯಾಜಿ, ಶ್ರೀ ರಾಜೇಶ್ ತೀರ್ಥ, ಶ್ರೀ ವಿಜಯ್ ಕುಮಾರ್, ಶ್ರೀ ಲಿಖಿತ್ ಮತ್ತು ಶ್ರೀ ಜಗದೀಶ್ ರವರುಗಳು. ಶಾಲೆ- ಶಾಲೆಗೆ, ಹಳ್ಳಿಯಿಂದ ಹಳ್ಳಿಗಳಿಗೆ ಕರೆದೊಯ್ಯುವಲ್ಲಿ ಹೆಜ್ಜೆ ಹೆಜ್ಜೆಗೂ ಅಲ್ಲಿನ ಕಾರ್ಯಕರ್ತರುಗಳು ಸಹಾಯ ಮಾಡಿದ್ದಾರೆ. ಮೂರುದಿನ ಶ್ರೀ ಮಠದಲ್ಲಿ ಊಟ ನೀಡಿ, ಖುದ್ದಾಗಿ ನಿಂತು ಸತ್ಕರಿಸಿದ ಶ್ರೀ ಮಠದ “ಅಕ್ಕ”ನವರಿಗೆ ನಾವು ಆಭಾರಿಯಾಗಿದ್ದೇವೆ. ಅಲ್ಲಿ ಮರಳಿ ಬರುವಾಗ ಇಳಕಲ್ಲಿನಲ್ಲಿ ಅಲ್ಲಿನ ಯುವ ಬ್ರಿಗೇಡ್ ಮತ್ತು ಸೋದರಿ ನಿವೇದಿತಾ ಪ್ರತಿಷ್ಠಾನದ ಸದಸ್ಯರುಗಳಿಗೆ ಒಂದು ತರಬೇತಿ ಕಾರ್ಯಾಗಾರವನ್ನ ಶ್ರೀ ಸುಬ್ಬು ಭಯ್ಯಾಜಿ ಅವರು ನಡೆಸಿದರು. ಇದರಿಂದ ಆ ಸದಸ್ಯರುಗಳು ಅಲ್ಲಿ “ಆಲ್ ದ ಬೆಸ್ಟ್” ಕಾರ್ಯಕ್ರಮನ್ನು ಮುಂದುವರೆಸಿಕೊಂಡು ಹೋಗಲು ಸಾಧ್ಯವಾಗಿದೆ.

ಅಷ್ಟೇ ಅಲ್ಲದೆ ಈಗಲೂ ಸಹ ಬೆಂಗಳೂರಿನಲ್ಲಿ ಶಾಲೆಗಳಲ್ಲಿ ಈ ಕಾರ್ಯಕ್ರಮವು ನಡೆಸುತ್ತಿದ್ದೇವೆ.
ಜಗದೀಶ ರಾ ಅಠವಣೆ.

IMG-20180220-WA0011

IMG-20180220-WA0012

IMG-20180220-WA0009

Leave a Reply

Your email address will not be published. Required fields are marked *

You May Also Like

ನನ್ನ ಕನಸಿನ ಕರ್ನಾಟಕ

ಕನಸು ಕಾಣುವುದಕ್ಕೆ ದುಡ್ಡು ಕೊಡಬೇಕೇ?’ ಇದು ಸಾಮಾನ್ಯವಾಗಿ ನಾವು ನೀವೆಲ್ಲ ಏನಾದರೂ ಕನಸು ಕಂಡದ್ದನ್ನು ಇನ್ನೊಬ್ಬರ ಹೇಳೋವಾಗ ಬಳಸುವಂತಹ ಒಂದು ಸರ್ವೇ ಸಾಮಾನ್ಯವಾದ ಮಾತು. ಹೌದು ಕನಸು ಕಾಣೋದಕ್ಕೆ ಕಾಸು ಕೊಡೋದು ಬೇಡ ನಿಜ. ಹಾಗಂತ ಕಂಡ ಕನಸನ್ನು ನನಸು ಮಾಡುವಂತ…
View Post

ಮತದಾನ ನಮ್ಮ‌ ಹಕ್ಕು

ಸಮರ್ಥನ ಆಯ್ಕೆ ನಮ್ಮ ಕರ್ತವ್ಯ.. ಪ್ರಜಾಪ್ರಭುತ್ವ ಅತ್ಯಂತ ಸುಂದರವಾದ ವ್ಯವಸ್ಥೆಗಳಲ್ಲೊಂದು. ಇದು ಪ್ರಜೆಗಳಿಗೆ ಆಳುವ ಹಕ್ಕನ್ನು ದಯಪಾಲಿಸುತ್ತದೆ. ತನ್ನ ಪ್ರತಿನಿಧಿಯಾಗುವ ಯೋಗ್ಯತೆ ಉಳ್ಳವರನ್ನು ತಾನೇ ಆರಿಸಿಕೊಳ್ಳುವ ಅವಕಾಶವನ್ನು ಕೊಡುವುದು ಪ್ರಜಾಪ್ರಭುತ್ವ ಮಾತ್ರ. ರಾಜಪ್ರಭುತ್ವದಲ್ಲಿ ಹಾಗಿರಲಿಲ್ಲ. ಅಲ್ಲಿ ರಾಜನೇ ತನ್ನ ಉತ್ತರಾಧಿಕಾರಿಯನ್ನು ಗುರುತಿಸುತ್ತಾನೆ,…
View Post

ನಿವೇದಿತಾ ಸೇವಾಕೇಂದ್ರ

ಅದ್ವೈತ ತತ್ತ್ವದ ಶ್ರೇಷ್ಠ ಪ್ರತಿಪಾದಕರಾದ ಶ್ರೀ ಶಂಕರಾಚಾರ್ಯರ ಜಯಂತಿಯಂದು ಅಂದರೆ ಏಪ್ರಿಲ್ 30 ರಂದು ಕಲ್ಲೋಳಿಯಲ್ಲಿ ಪ್ರಾರಂಭಗೊಂಡ ‘ನಿವೇದಿತಾ ಸೇವಾಕೇಂದ್ರ’ ಯಶಸ್ವಿಯಾಗಿ ನಡೆಯುತ್ತಿದೆ. ಆರ್ಥಿಕವಾಗಿ ಹಿಂದುಳಿದ, ಶೋಷಿತ ಹೆಣ್ಣುಮಕ್ಕಳು ಸ್ವಾವಲಂಬಿಗಳಾಗುವಂತೆ ರೂಪಿಸಿದ ಈ ಯೋಜನೆ ಫಲ ಕೊಡುತ್ತಿದೆ. ಲಘು ಉದ್ಯೋಗ ಭಾರತಿಯ…
View Post

ಸ್ವಚ್ಛ ರಾಜಮಾರ್ಗ

ಮಂಗಳೂರು ರಾಷ್ಟ್ರ ಮಟ್ಟದಲ್ಲಿ ಸ್ವಚ್ಛ ನಗರ ಎಂಬ ಹೆಸರು ಪಡೆದುಕೊಂಡಿದ್ದೇನೋ ನಿಜ. ಆದರೆ ಮಂಗಳೂರಿನ ಹೊರವಲಯದ ಕೆ.ಸಿ.ರಸ್ತೆ, ತಲಪಾಡಿ, ತೊಕ್ಕೊಟ್ಟುವಿನ ರಾಷ್ಟ್ರೀಯ ಹೆದ್ದಾರಿಯ ಇಕ್ಕೆಲಗಳಲ್ಲಿ ಪ್ಲಾಸ್ಟಿಕ್ ಹಾಗೂ ತ್ಯಾಜ್ಯಗಳು ತುಂಬಿ ಹೋಗಿ ಸ್ವಚ್ಛ ನಗರಕ್ಕೆ ಕಪ್ಪು ಚುಕ್ಕೆಯಾಗಿ ನಿಂತಿತ್ತು.ಈ ರಸ್ತೆ ಕೇರಳದಿಂದ…
View Post

“ವಿಕಾಸ ಪರ್ವ”

ಪ್ರಾಚೀನ ಕಾಲದಿಂದಲೂ ಭಾರತದಲ್ಲಿ ಜಾತಿ ವ್ಯವಸ್ಥೆ ಇರಲೇ ಇಲ್ಲ. ಅದೆಲ್ಲ ಹುಟ್ಟಿದ್ದು ನಂತರದ ದಿನಗಳಲ್ಲೇ! ಶ್ರೇಷ್ಠ ಪರಂಪರೆಯೊಂದು ಕಾಲಘಟ್ಟದ ಬದಲಾವಣೆಯಲ್ಲಿ ಜಾತಿ ಎಂಬ ಅನಿಷ್ಠ ಪದ್ಧತಿಯಾಗಿ ರೂಪುಗೊಂಡಿತು. ಈಗ ನಾವು ಭಾರತವನ್ನು ಮತ್ತದೇ ಪಟ್ಟಕ್ಕೆ ಕೊಂಡೊಯ್ಯುವ ಕೆಲಸಕ್ಕೆ ಮುನ್ನುಡಿ ಬರೆಯಬೇಕಾಗಿದೆ.ಜಾತಿಯನ್ನು ಮೀರಿ…
View Post

ಸ್ವಚ್ಛತೆಯೇ ಆರೋಗ್ಯ

ಸ್ವಚ್ಛತೆ ಆರೋಗ್ಯದೆಡೆಗಿನ ಮೊದಲ ಹೆಜ್ಜೆ. ನಮ್ಮ ಸುತ್ತ-ಮುತ್ತಲಿನ ಪರಿಸರವನ್ನು ಸ್ವಚ್ಛವಾಗಿರಿಸಿಕೊಳ್ಳುವುದರಿಂದ ರೋಗ-ರುಜಿನಗಳು ಹರಡುವುದನ್ನು ತಡೆಗಟ್ಟಬಹುದು. ಆದರೆ, ಆರೋಗ್ಯ ಹದಗೆಟ್ಟಲ್ಲಿ ನೋಡಿಕೊಳ್ಳಬೇಕಾದ ಸರ್ಕಾರಿ ಆಸ್ಪತ್ರೆಗಳೇ ಸ್ವಚ್ಛವಾಗಿರುವುದಿಲ್ಲ! ಸರ್ಕಾರಿ ಆಸ್ಪತ್ರೆಗಳ ಈ ದೈನೀಸಿ ಸ್ಥಿತಿಯನ್ನು ಕಂಡು ಯುವಾಬ್ರಿಗೇಡ್ ‘ಸ್ವಚ್ಛತೆಯೇ ಆರೋಗ್ಯ’ ಎಂಬ ಹೆಸರಿನಡಿಯಲ್ಲಿ ಹಲವು…
View Post